ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.
ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…