#Drought | ಇನ್ನೂ ಬಾರದ ಮುಂಗಾರು ಮಳೆ | ದೇವರಿಗೆ ಜಲ ದಿಗ್ಬಂಧನ ಹಾಕಿ ಶಿಕ್ಷೆ ನೀಡಿದ ಗ್ರಾಮಸ್ಥರು : ಇನ್ನಾದರೂ ವರುಣ ದೇವ ಒಲಿವನೇ..?

June 16, 2023
9:46 AM

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.

Advertisement

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ.  ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.

ಅದರಂತೆ ಇದೀಗ ಗರ್ಭಗುಡಿಯಲ್ಲಿ ನೀರು ಹಾಕಿ, ಬೀಗ ಹಾಕಿದ್ದಾರೆ. ಜೂನ್ ತಿಂಗಳು ಶುರುವಾಗಿ ಈಗಾಗಲೇ ಅರ್ಧ ತಿಂಗಳು ಕಳೆದಿದ್ದು, ಆದರೂ ಕೂಡ ಮುಂಗಾರು ಮಳೆ ಇನ್ನು ಬಂದಿಲ್ಲ. ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು, ಉತ್ತರ ಕರ್ನಾಟಕದಲ್ಲಿ ಬರಗಾಲ ಛಾಯೆ ಮೂಡಿದೆ. ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ವೇದಗಂಗಾ, ದೂಧ್ ಗಂಗಾ, ಮಾರ್ಕಂಡೇಯ ಹೀಗೆ ಏಳಕ್ಕೆ ಏಳು ನದಿಗಳು ಬತ್ತುವ ಆತಂಕ ಎದುರಾಗಿದೆ.
( ಅಂತರ್ಜಾಲ ಮಾಹಿತಿ)

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ
April 17, 2025
5:27 AM
by: ದ ರೂರಲ್ ಮಿರರ್.ಕಾಂ
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ
ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

You cannot copy content of this page - Copyright -The Rural Mirror

Join Our Group