ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ ಬಾರದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಮಳೆ ಬಂದರೆ ಬಿತ್ತಿದ ಬೀಜ ಮೊಳಕೆಯೊಡೆಯುತ್ತೆ. ಇಲ್ಲಾಂದ್ರೆ ರೈತನ ಬದುಕು ಮೂರಾಬಟ್ಟೆ. ಬೆಳಗಾವಿ, ಧಾರವಾಡ, ಬಾಗಲಕೋಟ, ಗದಗ ಜಿಲ್ಲೆಯ ಜೀವನಾಡಿಯಾದ ಮಲಪ್ರಭಾ ಖಾಲಿಯಾಗಿದ್ದಾಳೆ. ಮಲಪ್ರಭೆ ಮುನಿಸಿಕೊಂಡಿದ್ದಾಳೆ. ಆದರೆ ಇಲ್ಲಿ ಜನ ಮಳೆ ನೀಡದ ಕಾರಣಕ್ಕೆ ದೇವರಿಗೆ ಶಿಕ್ಷೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜಲ ದಿಗ್ಬಂಧನ ಹಾಕಿದ್ದಾರೆ. ಬರಗಾಲದ ಮುನ್ಸೂಚನೆಗೆ ಹೆದರಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಗರ್ಭಗುಡಿಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನೀರು ಹಾಕಿ, ಜಲ ದಿಗ್ಬಂಧನ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮಳೆ ಬಾರದೆ ಹೋದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಸವದತ್ತಿ, ಹುಬ್ಬಳ್ಳಿ, ಧಾರವಾಡಕ್ಕೆ ನೀರಿನ ಅಭಾವವಾಗುವ ಚಿಂತೆ ಎದುರಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ನವಿಲು ತೀರ್ಥ ಜಲಾಶಯ ಬಹುತೇಕ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ದರೆ, ಜಿಲ್ಲೆಯ ಜನರಿಗೆ ಕಂಟಕ ಕಾದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…