ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

June 23, 2025
7:56 AM

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ ಜಿಲ್ಲೆಯ ಕದ್ರಾದಲ್ಲಿ ಅತಿಹೆಚ್ಚು 11 ಸೆಂಟಿ ಮೀಟರ್ ಮಳೆಯಾಗಿದೆ. ಕಾರ್ಕಳ 5, ಕ್ಯಾಸಲ್‌ರಾಕ್ 4, ಸಿದ್ದಾಪುರ, ಮೂಡಬಿದ್ರೆ ಮತ್ತು ಕೊಟ್ಟಿಗೆಹಾರ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಭಾಗಮಂಡಲ, ಶೃಂಗೇರಿ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಮಂಗಳೂರು ಮತ್ತು ಯಲ್ಲಾಪುರದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 30, ಕನಿಷ್ಠ 21 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಸಂಭವ.

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror