ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ ಜಿಲ್ಲೆಯ ಕದ್ರಾದಲ್ಲಿ ಅತಿಹೆಚ್ಚು 11 ಸೆಂಟಿ ಮೀಟರ್ ಮಳೆಯಾಗಿದೆ. ಕಾರ್ಕಳ 5, ಕ್ಯಾಸಲ್‌ರಾಕ್ 4, ಸಿದ್ದಾಪುರ, ಮೂಡಬಿದ್ರೆ ಮತ್ತು ಕೊಟ್ಟಿಗೆಹಾರ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಭಾಗಮಂಡಲ, ಶೃಂಗೇರಿ, ಗುಬ್ಬಿ, ಕಮ್ಮರಡಿ, ಮಾಣಿ, ಉಪ್ಪಿನಂಗಡಿ, ಮಂಗಳೂರು ಮತ್ತು ಯಲ್ಲಾಪುರದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 30, ಕನಿಷ್ಠ 21 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಸಂಭವ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…