Advertisement
MIRROR FOCUS

ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |

Share

ಸಂಸತ್ತಿನ ಮುಂಗಾರು ಅಧಿವೇಶನವನ್ನು ವಿಜಯೋತ್ಸವದ ಅಧಿವೇಶನದ ರೂಪದಲ್ಲಿ ನಾವು ನೋಡಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…… ಮುಂದೆ ಓದಿ……

ಸಂಸತ್ ಕಲಾಪ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಅವರು, ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತ್ರಿವರ್ಣ ಧ್ವಜ ಹಾರಾಡುವಂತಾಗಿದ್ದು, ಶುಭಾಂಶು ಶುಕ್ಲಾ ಅಂತರಿಕ್ಷ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಿಶ್ವದಲ್ಲಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಇಡೀ ವಿಶ್ವಕ್ಕೆ ಸೇನಾ ಸಾಮರ್ಥ್ಯ ಏನೆಂಬುದು ತಿಳಿದಿದೆ. ಭಯೋತ್ಪಾದಕರ ಕೋಟೆಯೊಳಗೆ ನುಗ್ಗಿ ಕಡಿಮೆ ಅವಧಿಯಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಸೇನಾಶಕ್ತಿ ಅನಾವರಣಗೊಂಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ವಿಜಯದ ಭಾವನೆಯನ್ನು ಒಂದೇ ಸ್ವರದಲ್ಲಿ ವ್ಯಕ್ತಪಡಿಸಲು ಈ ಸದನ ವಿಜಯೋತ್ಸವದ ವೇದಿಕೆ ಎಂಬಂತಾಗಿದೆ ಎಂದು ಹೇಳಿದರು.

ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಎಲ್ಲೆಡೆ ಉತ್ತಮ ವಾತಾವರಣವಿದೆ. ಕೃಷಿಗೆ ಹೆಚ್ಚು ಲಾಭದಾಯಕವಾಗಿದ್ದು, ರೈತರು, ಗ್ರಾಮೀಣ ಪ್ರದೇಶದ ಜನತೆ, ಕುಟುಂಬ ವರ್ಗ ಹಾಗೂ ದೇಶದ ಅರ್ಥವ್ಯವಸ್ಥೆಗೆ ಪೂರಕವಾಗಿದೆ. ಈ ಮುಂಗಾರು ಅಧಿವೇಶನ ರಾಷ್ಟ್ರಕ್ಕೆ ಗೌರವಪೂರ್ಣ ಹಾಗೂ ವಿಜಯೋತ್ಸವವಾಗಿದೆ ಎಂದು ತಿಳಿಸಿದರು.

ದೇಶದ ಕೆಲವೆಡೆ ನಕ್ಸಲ್ ಸಮಸ್ಯೆ ಇನ್ನೂ ಇದೆ. ಈಗಾಗಾಲೇ ಹಲವಾರು ಪ್ರದೇಶಗಳು ನಕ್ಸಲ್ ಮುಕ್ತವಾಗಿವೆ. ಮುಂಬರುವ ದಿನಗಳಲ್ಲಿ  ಮಾವೋವಾದವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲಾಗುವುದು. ದೇಶದ ಹಿತಾಸಕ್ತಿ ದೃಷ್ಟಿಯಿಂದ ಈ ಕಲಾಪದಲ್ಲಿ ಎಲ್ಲ ಸದಸ್ಯರು ಉತ್ತಮ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು.  ಭಾರತ ವಿಶ್ವದ ಮೂರನೇ ಅರ್ಥವ್ಯವಸ್ಥೆ ದೇಶವಾಗುವತ್ತ ಮುನ್ನಡೆದಿದೆ.  ದೇಶದ ಉಜ್ವಲ ಭವಿಷ್ಯ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

5 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

24 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago