ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

May 13, 2025
7:20 AM
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ ಮಾನ್ಸೂನ್ ಆರಂಭವಾಗಲಿದೆ. ಕಳೆದ 24 ಗಂಟೆಗಳಲ್ಲಿ ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗಿದ್ದು,  ನಿಕೋಬಾರ್ ದ್ವೀಪಗಳಲ್ಲಿ ಮಳೆಯ ಚಟುವಟಿಕೆಯು ಮುಂದಿನ 24 ಗಂಟೆಗಳಲ್ಲಿ ವ್ಯಾಪಕವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಮಂಗಳವಾರದ ವೇಳೆಗೆ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗುವ ದಿನಗಳಿಂತ ಒಂದು ವಾರ ಮುಂಚಿತವಾಗಿಯೇ ಈ ಬಾರಿ ಮುಂಗಾರು ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಇದೇ ವೇಳೆ ಮುಂಗಾರು ಪೂರ್ವ ಮಳೆಯಾಗಲಿದ್ದು ಕೇರಳದಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಪತ್ತನಂತಿಟ್ಟ, ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. …..ಮುಂದೆ ಓದಿ….

Advertisement

2020 ರಲ್ಲಿ ಬಿಡುಗಡೆಯಾದ ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ ಮಾನ್ಸೂನ್ ಆರಂಭವಾಗಲಿದೆ. ಕಳೆದ 24 ಗಂಟೆಗಳಲ್ಲಿ ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗಿದ್ದು,  ನಿಕೋಬಾರ್ ದ್ವೀಪಗಳಲ್ಲಿ ಮಳೆಯ ಚಟುವಟಿಕೆಯು ಮುಂದಿನ 24 ಗಂಟೆಗಳಲ್ಲಿ ವ್ಯಾಪಕವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಮುಂದಿನ 4-5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್, ಕೊಮೊರಿನ್ ಪ್ರದೇಶದ ಕೆಲವು ಭಾಗಗಳು, ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಸಂಪೂರ್ಣ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮತ್ತಷ್ಟು  ಮುಂದುವರಿಯಲು ಸದ್ಯ  ಅನುಕೂಲಕರವಾದ ಪರಿಸ್ಥಿತಿ ಇದೆ ಎಂದು ಐಎಂಡಿ ತಿಳಿಸಿದೆ.

ಹವಾಮಾನ ಮಾಹಿತಿಗಳನ್ನು ಹಾಗೂ ಕೃಷಿ ಸುದ್ದಿಗಳನ್ನು ಪಡೆಯಲು “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಮೇ 10 ರಂದು, ಹವಾಮಾನ ಸಂಸ್ಥೆಯು ಮೇ 27 ರಂದು ಕೇರಳದಲ್ಲಿ ಮುಂಗಾರು  ಪ್ರಾರಂಭವಾಗಬಹುದು ಎಂದು ಹೇಳಿತ್ತು. ಹೀಗಾಗಿ ಜೂನ್ 1 ರ ಸಾಮಾನ್ಯ ಪ್ರಾರಂಭ ದಿನಾಂಕಕ್ಕಿಂತ ನಾಲ್ಕು ದಿನಗಳ ಮೊದಲು ಮಳೆಯಾಗಬಹುದು ಎಂದು ಹೇಳಿತ್ತು. ಈ ನಡುವೆ ಸದ್ಯ ಚಂಡಮಾರುಗಳು ಸೃಷ್ಟಿಯಾದರೆ ಮುಂಗಾರು ವಿಳಂಬವಾಗುವ ಸಾಧ್ಯತೆ ಕೂಡಾ ಇದೆ.

ಹವಾಮಾನ ಮಾಹಿತಿಗಳನ್ನು ಹಾಗೂ ಕೃಷಿ ಸುದ್ದಿಗಳನ್ನು ಪಡೆಯಲು “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror