27.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಾಗಲೇ ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…