ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು ಕಡೆ ಮಳೆ ಆರಂಭವಾಗಿದೆ. ಜೂನ್.1 ರ ಸುಮಾರಿಗೆ ಕೇರಳದ ಹಲವು ಕಡೆ ಮಳೆ ಆರಂಭವಾಗಿ ಕೇರಳ ಮತ್ತು ಮಾಹೆ, ತಮಿಳುನಾಡು ಕರಾವಳಿಯಲ್ಲಿ ಮಳೆಯಾಗಲಿದೆ. ಜೂ. 02 ಮತ್ತು 03 ಜೂನ್ ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವೆದರ್ ಅಪ್ಡೇಟ್ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1ರ ಮೊದಲು ಕೇರಳಕ್ಕೆ ಮುಂಗಾರು ಆಗಮಿಸಲಿದೆ ಎನ್ನುವುದು ಇನ್ನೊಮ್ಮೆ ಖಚಿತವಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮತ್ತೊಮ್ಮೆ ಅಪ್ಡೇಟ್ ನೀಡಿದೆ. ಜೂನ್ 02 ಹಾಗೂ 03 ರಂದು ದಕ್ಷಿಣ ಅಂಡಮಾನ್ ಸಮುದ್ರದ ಎಲ್ಲಾ ಪ್ರದೇಶಗಳಲ್ಲಿ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…