Monsoon Updates | ಇನ್ನು 2 ದಿನಗಳ ಕಾಲ ಮಾನ್ಸೂನ್‌ ಪ್ರಗತಿ ಇಲ್ಲ |

May 31, 2022
10:51 PM

ಕೇರಳದ ಕಡೆಗೆ ವೇಗವಾಗಿ ಆಗಮಿಸಿದ ನೈರುತ್ಯ ಮಾನ್ಸೂನ್‌ ಈಗ ಹೆಚ್ಚಿನ ಪ್ರಗತಿ ಕಂಡಿಲ್ಲ. ಹೀಗಾಗಿ ಉತ್ತರ ಕೇರಳ, ಕರ್ನಾಟಕ ಮತ್ತು ಮಧ್ಯ ತಮಿಳುನಾಡಿಗೆ ಈಗ ಮಳೆಯ ನಿರೀಕ್ಷೆ ಇದೆ. ಮೇ 29 ರಂದು ಕೇರಳ, ದಕ್ಷಿಣ ತಮಿಳುನಾಡು ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳನ್ನು ತಲುಪಿದ ನೈಋತ್ಯ ಮಾನ್ಸೂನ್ ನಂತರ ವೇಗ ಪಡೆಯಲಿಲ್ಲ, ದುರ್ಬಲವಾದ ಕಾರಣ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗಿಲ್ಲ.ಆದರೆ ಹವಾಮಾನ ಇಲಾಖೆಯ ಪ್ರಕಾರ ಮಾರುತವು ಕರ್ನಾಟಕದ ಕೆಲವು ಪ್ರದೇಶಗಳಿಗೂ ತಲುಪಿದೆ. ವೇಗ ಪಡೆದ ತಕ್ಷಣವೇ ಮಳೆಯಾಗುವ ನಿರೀಕ್ಷೆ ಇದೆ.

ಮಾನ್ಸೂನ್ ಆರಂಭದ ನಂತರ ಕೇರಳದ 14 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಿದೆ. ಅಲಪ್ಪುಳ ಮತ್ತು ಕೊಟ್ಟಾಯಂನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು, ಕ್ರಮವಾಗಿ 53ಮಿಮೀ ಮತ್ತು 52ಮಿಮೀ ಮಳೆಯಾಗಿದೆ. ಜೂನ್ 2 ರವರೆಗೂ ಇದೇ ಲಕ್ಷಣಗಳು ಮುಂದುವರಿಯಲಿದೆ. ಆದರೆ , ಭಾರತದ ಮಳೆಯಾಶ್ರಿತ ಕೃಷಿ ಪ್ರದೇಶವು ಈ ಮಾನ್ಸೂನ್‌ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಕಚೇರಿ ಮಂಗಳವಾರ ತಿಳಿಸಿದೆ. 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror