ಈ ಬಾರಿಯ ಅಂದರೆ 2025 ರ ಮುಂಗಾರು ಮಳೆಯು ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಹೇಳಿದೆ.ಲಾ ನಿನಾದಿಂದ ತ್ವರಿತ ಪರಿವರ್ತನೆಯಿಂದಾಗಿ ಮತ್ತು ಮುಂಗಾರು ಸಾಮಾನ್ಯಕ್ಕಿಂತ ಅರ್ಧದಷ್ಟು ವೇಗವನ್ನು ಪಡೆಯುವುದರಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಮುಂಗಾರು 868.6 ಮಿಲಿಮೀಟರ್ ಮಳೆಯು ಸಾಮಾನ್ಯವಾಗಿದೆ ಎಂದು ಸ್ಕೈಮೆಟ್ ಮಂಗಳವಾರದ ಹೇಳಿಕೆಯಲ್ಲಿ ತಿಳಿಸಿದೆ.…..ಮುಂದೆ ಓದಿ….
ಈ ಬಾರಿ ಲಾ ನಿನಾ ಕೂಡ ದುರ್ಬಲ ಮತ್ತು ಕೆಲ ದಿನಗಳವರೆಗೆ ಮಾತ್ರಾ ಕಂಡಿತ್ತು. ಈಗ ಲಾ ನಿನಾದ ಪ್ರಭಾವ ಕಡಿಮೆಯಾಗಲು ಪ್ರಾರಂಭಿಸಿವೆ. ಸಾಮಾನ್ಯವಾಗಿ ಮುಂಗಾರು ಮಳೆಯನ್ನುದುರ್ಬಲಗೊಳಿಸುವ ಎಲ್ ನಿನೊ ಸಂಭವಿಸುವುದು ಸದ್ಯದ ಮಟ್ಟಿಗೆ ಅಸಾಧ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ಕಾರಣಗಳಿಂದ ನಿಗದಿತವಾಗಿ ಆರಂಭವಾಗುವ ಮುಂಗಾರು ಸಾಮಾನ್ಯವಾಗಿಯೇ ಮುಂದುವರಿಯಬಹುದು ಎಂದು ಸ್ಕೈಮೆಟ್ ಅಂದಾಜಿಸಿದೆ.
ನಮ್ಮ ವ್ಯಾಟ್ಸಪ್ ಚಾನೆಲ್‌ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ….
ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಸಾಕಷ್ಟು ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟಗಳಾದ್ಯಂತ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುನ್ಸೂಚನೆಯ ಪ್ರಕಾರ, ಈಶಾನ್ಯ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಈ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…