ರಾಜ್ಯದ ಬಹುತೇಕ ಕಡೆ ಅಬ್ಬರಿಸಲಿದೆ ಹಿಂಗಾರು ಮಳೆ | ರಾಜ್ಯದ 6 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ |

November 7, 2023
11:27 AM
ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಈ ಬಾರಿ ಬಹುತೇಕ ಕೈಕೊಟ್ಟಿತ್ತು. ರಾಜ್ಯದ 120 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ(Drought) ಎಂದು ರಾಜ್ಯ ಸರ್ಕಾರ(State govt) ಘೋಷಣೆ ಮಾಡಿದೆ. ಇದೀಗ ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸೋಮವಾರದಿಂದ ಎಡೆಬಿಡದಂತೆ ಮಳೆ (Rain) ಸುರಿಯುತ್ತಿದೆ. ಇಂದು ಮತ್ತು ನಾಳೆ ಕೂಡ ಜೋರಾಗಿರಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯಿಂದ (Indian Meteorological Department) ಮಳೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಮತ್ತು ನಾಳೆ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ ಇದೆ.

ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆ ಇದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ರಾಜಧಾನಿಯಲ್ಲಿ ಭಾರಿ ಮಳೆಯಾಗಿದೆ. ಹಿಂಗಾರು ಅಬ್ಬರಕ್ಕೆ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ಸತತ ಮೂರ್ನಾಲ್ಕು ಗಂಟೆಗಳ ಕಾಲ ಎಡಬಿಡದೆ ಮಳೆ ಸುರಿದಿದೆ. ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಯಲಹಂಕದಲ್ಲಿ ಅತಿಹೆಚ್ಚು ಮಳೆಯಾಗಿದ್ದು, 14.7 ಸೆಂ.ಮೀ ಮಳೆ ದಾಖಲಾಗಿದೆ.

Monsoon rains have lashed the state and many districts including Bengaluru have been receiving non-stop rain since Monday. Today and tomorrow will also be loud, Yellow Alert has been announced for 6 districts of the state. Heavy rain with thunder and lightning has been warned for four days and yellow alert has been announced on Tuesday and Wednesday. Yellow alert has been announced for Chikkamagaluru, Udupi, Dakshina Kannada, Chitradurga, Chikkaballapur, Kolar districts.

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror