ರೈತ ಮಹಿಳೆಯರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ. ಇದೇ ಕಾರಣದಿಂದ ಸಿರಿ ಸಮೃದ್ಧಿ ಎಂಬ ಹೆಸರಿನಲ್ಲಿ ಬ್ರ್ಯಾಂಡಿಂಗ್ ಮಾಡಲಾಗುತ್ತಿದ್ದು, ಈ ಬ್ರ್ಯಾಂಡಿಂಗ್ ನಿಂದ ರೈತರ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಂದಿನಿ ಹೇಳಿದರು.
ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದ ಅಂಗವಾಗಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ತಾಂತ್ರಿಕ ಕಾರ್ಯಾಗಾರವನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ, ಮಂಡ್ಯ ಜಿಲ್ಲಾಡಳಿತ, ಹಾಗೂ ಕೃಷಿ ಇಲಾಖೆ ಈ ಕಾರ್ಯಾಗಾರವನ್ನು ಏರ್ಪಡಿಸಿತ್ತು.
ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾಸಾಬ್ ಮಾತನಾಡಿ, ಮಹಿಳಾ ಸಹಕಾರ ಸಂಘಗಳಿಗೆ ಮೀನುಗಾರಿಕೆಗಾಗಿ ಕಡಿಮೆ ದರದಲ್ಲಿ ಕೆರೆಗಳನ್ನು ಗುತ್ತಿಗೆ ನೀಡಲಾಗುತ್ತಿದ್ದು, ಮಹಿಳಾ ಸಹಕಾರ ಸಂಘಗಳು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಆಹಾರ ಉತ್ಪನ್ನಗಳ ತಯಾರಕರಾದ ಸಾಕಮ್ಮ, ಸಾವಯವ ಬೆಲ್ಲದ ಪಾಯಸ, ಮಿಠಾಯಿ ಸೇರಿ ವಿವಿಧ ರೀತಿಯ ಆಹಾರ ತಯಾರಿಕೆಯಲ್ಲಿ ತೋಡಗಿದ್ದೇವೆ. ನಮ್ಮ ಉತ್ಪನ್ನಗಳಿಗೆ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಬೇಡಿಕೆ ಹೆಚ್ಚಾಗುತ್ತಿದೆ ಎಂದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಾಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಶಿವಲಿಂಗಯ್ಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…