Advertisement
ಸುದ್ದಿಗಳು

ಮಹಿಳೆಯರಿಗೆ ತಾಂತ್ರಿಕಾ ಕಾರ್ಯಾಗಾರ | ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆಯಿಂದ ಹೆಚ್ಚು ಲಾಭ

Share

ರೈತ ಮಹಿಳೆಯರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆಗೊಳಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ. ಇದೇ ಕಾರಣದಿಂದ ಸಿರಿ ಸಮೃದ್ಧಿ ಎಂಬ ಹೆಸರಿನಲ್ಲಿ ಬ್ರ್ಯಾಂಡಿಂಗ್ ಮಾಡಲಾಗುತ್ತಿದ್ದು, ಈ ಬ್ರ್ಯಾಂಡಿಂಗ್ ನಿಂದ ರೈತರ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಂದಿನಿ ಹೇಳಿದರು.

ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನದ ಅಂಗವಾಗಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ತಾಂತ್ರಿಕ ಕಾರ್ಯಾಗಾರವನ್ನು  ಮಂಡ್ಯದಲ್ಲಿ  ಆಯೋಜಿಸಲಾಗಿತ್ತು. ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ, ಮಂಡ್ಯ ಜಿಲ್ಲಾಡಳಿತ, ಹಾಗೂ ಕೃಷಿ ಇಲಾಖೆ ಈ ಕಾರ್ಯಾಗಾರವನ್ನು ಏರ್ಪಡಿಸಿತ್ತು.

ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾಸಾಬ್‌ ಮಾತನಾಡಿ, ಮಹಿಳಾ ಸಹಕಾರ ಸಂಘಗಳಿಗೆ ಮೀನುಗಾರಿಕೆಗಾಗಿ ಕಡಿಮೆ ದರದಲ್ಲಿ ಕೆರೆಗಳನ್ನು ಗುತ್ತಿಗೆ ನೀಡಲಾಗುತ್ತಿದ್ದು, ಮಹಿಳಾ ಸಹಕಾರ ಸಂಘಗಳು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಆಹಾರ ಉತ್ಪನ್ನಗಳ ತಯಾರಕರಾದ ಸಾಕಮ್ಮ, ಸಾವಯವ ಬೆಲ್ಲದ ಪಾಯಸ, ಮಿಠಾಯಿ ಸೇರಿ ವಿವಿಧ ರೀತಿಯ ಆಹಾರ ತಯಾರಿಕೆಯಲ್ಲಿ ತೋಡಗಿದ್ದೇವೆ. ನಮ್ಮ ಉತ್ಪನ್ನಗಳಿಗೆ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಬೇಡಿಕೆ ಹೆಚ್ಚಾಗುತ್ತಿದೆ ಎಂದರು.

ಸಭೆಯಲ್ಲಿ  ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಾಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಶಿವಲಿಂಗಯ್ಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago