14.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 14 ರಿಂದ ಮಳೆ ಕಡಿಮೆಯಾದರೂ 16 ಅಥವಾ 17 ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಲೆನಾಡು ಭಾಗಗಳಲ್ಲಿ ನಾಳೆಯಿಂದ ಮಳೆ ಕಡಿಮೆಯಾದರೂ ನವೆಂಬರ್ 16 ಅಥವಾ 17 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಮತ್ತು ಕೋಲಾರ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಬಲಗೊಂಡಿದ್ದು, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾತ್ರ ಮಳೆಯಾಗುವ ಲಕ್ಷಣಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…


