Advertisement
ವೆದರ್ ಮಿರರ್

ಹವಾಮಾನ ವರದಿ | 13-11-2025 | ನ.16 ರಿಂದ ಮತ್ತೆ ಮಳೆ ಸಾಧ್ಯತೆ

Share

14.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 14 ರಿಂದ ಮಳೆ ಕಡಿಮೆಯಾದರೂ 16 ಅಥವಾ 17 ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಲೆನಾಡು ಭಾಗಗಳಲ್ಲಿ ನಾಳೆಯಿಂದ ಮಳೆ ಕಡಿಮೆಯಾದರೂ ನವೆಂಬರ್ 16 ಅಥವಾ 17 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಮತ್ತು ಕೋಲಾರ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಬಲಗೊಂಡಿದ್ದು, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾತ್ರ ಮಳೆಯಾಗುವ ಲಕ್ಷಣಗಳಿವೆ.  ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

11 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

16 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

17 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

17 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

17 hours ago

531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?

ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…

18 hours ago