ಭಾರತೀಯ ರೈಲ್ವೆ ಹಬ್ಬದ ಋತುವಿನಲ್ಲಿ ಪ್ರಮುಖವಾಗಿ ಹಬ್ಬದ ಅಂಗವಾಗಿ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ 5 ದಿನಗಳಲ್ಲಿ 1500ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದೆ.
ನಿಗದಿತ ರೈಲುಗಳ ಜೊತೆಗೆ ಈ ಹೆಚ್ಚುವರಿ ರೈಲುಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ತಮ್ಮ ನಿಗದಿತ ಸ್ಥಳಗಳಿಗೆ ತಲುಪಿಸಲಿವೆ. ದಿನಕ್ಕೆ ಸರಾಸರಿ 300 ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರ ಸುರಕ್ಷತೆಗೂ ಸಹ ಹೆಚ್ಚಿನ ಒತ್ತು ನೀಡಲಾಗಿದೆ. ಕಳೆದ 21 ದಿನಗಳಲ್ಲಿ ಭಾರತೀಯ ರೈಲ್ವೆ ಸರಾಸರಿ 213 ಟ್ರಿಪ್ ಗಳಂತೆ 4 493 ವಿಶೇಷ ರೈಲು ಟ್ರಿಪ್ ಗಳಲ್ಲಿ ಪ್ರಯಾಣಿಕರು ದೀಪಾವಳಿ ಹಬ್ಬದ ವೇಳೆ ಸುರಕ್ಷಿತವಾಗಿ ಮನೆ ತಲುಪಲು ಸಹಾಯ ಮಾಡಿದೆ. ಒಟ್ಟಾರೆ ಭಾರತೀಯ ರೈಲ್ವೆ ಅಕ್ಟೋಬರ್ 1 ರಿಂದ ನವೆಂಬರ್ 30ರ ವರೆಗೆ 61 ದಿನಗಳಲ್ಲಿ ದೇಶಾದ್ಯಂತ 12 ಸಾವಿರಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಕಲ್ಪಿಸುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಇನ್ನೂ ಹೆಚ್ಚಿನ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ಇದರಿಂದಾಗಿ ಪ್ರಯಾಣಿಕರ ದಟ್ಟಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…