50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

May 24, 2025
10:37 AM
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ. ಆದರೆ, ವರ್ತಕರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವೇಳೆ  ಕೃತಕ ರಾಸಾಯನಿಕ ಸೇರ್ಪಡೆ ಮಾಡುವುದು  ವ್ಯಾಪಕವಾಗಿದೆ. ಇದರಿಂದ  ಬಳಕೆದಾರರ ಆರೋಗ್ಯದ ಮೇಲೆ  ವ್ಯತಿರಿಕ್ತ ಪರಿಣಾಮ  ಉಂಟಾಗುತ್ತಿದೆ. ಇಂತಹವುಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೃಷಿ ವಲಯದ ಮೇಲಿನ ಹೆಚ್ಚಿನ ಅವಲಂಬನೆ ಕಡಿಮೆ ಮಾಡುವುದು ಅತ್ಯವಶ್ಯ ಎಂದರು. ಪ್ರಸ್ತುತ ದೇಶದಲ್ಲಿ ಸುಮಾರು 50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿ ನಿರತರಾಗಿದ್ದು, ಜಿಡಿಪಿಗೆ ಕೃಷಿಯ ಕೊಡುಗೆ  ಕೇವಲ ಶೇಕಡ 18ರಷ್ಟಿದೆ.  ಮತ್ತೊಂದೆಡೆ 26 ಕೋಟಿ ಜನರಿಗೆ ಉದ್ಯೋಗ ಒದಗಿಸಿರುವ MSME ವಲಯ ಶೇಕಡ 30ರಷ್ಟು ಕೊಡುಗೆ ನೀಡುತ್ತಿದೆ. ಈ ಅಂತರ ಕಡಿಮೆಯಾಗಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ- MSME  ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ  ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

Advertisement

ದಕ್ಷಿಣ ಕನ್ನಡದ ಸುಳ್ಯದಲ್ಲಿ ಜೇನು ಕೃಷಿಕರ ಸಹಕಾರಿ ಸಂಘದ  ನೂತನ ಕಟ್ಟಡ ಉದ್ಘಾಟನೆ  ನೆರವೇರಿಸಿ, ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದರು. ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ  ಅಡಿಕೆ ಕೃಷಿಯ ಜೊತೆಗೆ ಪೂರಕ ಮತ್ತು ಮಿಶ್ರ ಬೇಸಾಯ ಅಳವಡಿಕೆ ಮಾಡಲು  ರೈತ ಸಮುದಾಯಕ್ಕೆ  ಕರೆ  ನೀಡಿದ ಅವರು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ವೆನಿಲಾ ಕೃಷಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳನ್ನು ಅಡಿಕೆ ತೋಟದ  ನಡುವೆ ಪೂರಕವಾಗಿ ಅಳವಡಿಸಿಕೊಳ್ಳಬೇಕು. ಪೂರಕ ಮತ್ತು ಮಿಶ್ರ ಬೇಸಾಯ ಕೈಗೊಳ್ಳುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ  ಅತ್ಯಂತ ಕಡಿಮೆ ಇರುವುದು  ವರದಿಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ. ಆದರೆ, ವರ್ತಕರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವೇಳೆ  ಕೃತಕ ರಾಸಾಯನಿಕ ಸೇರ್ಪಡೆ ಮಾಡುವುದು  ವ್ಯಾಪಕವಾಗಿದೆ. ಇದರಿಂದ  ಬಳಕೆದಾರರ ಆರೋಗ್ಯದ ಮೇಲೆ  ವ್ಯತಿರಿಕ್ತ ಪರಿಣಾಮ  ಉಂಟಾಗುತ್ತಿದೆ. ಇಂತಹವುಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯ ಎಂದು ತಿಳಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror