ಕೃಷಿ ವಲಯದ ಮೇಲಿನ ಹೆಚ್ಚಿನ ಅವಲಂಬನೆ ಕಡಿಮೆ ಮಾಡುವುದು ಅತ್ಯವಶ್ಯ ಎಂದರು. ಪ್ರಸ್ತುತ ದೇಶದಲ್ಲಿ ಸುಮಾರು 50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿ ನಿರತರಾಗಿದ್ದು, ಜಿಡಿಪಿಗೆ ಕೃಷಿಯ ಕೊಡುಗೆ ಕೇವಲ ಶೇಕಡ 18ರಷ್ಟಿದೆ. ಮತ್ತೊಂದೆಡೆ 26 ಕೋಟಿ ಜನರಿಗೆ ಉದ್ಯೋಗ ಒದಗಿಸಿರುವ MSME ವಲಯ ಶೇಕಡ 30ರಷ್ಟು ಕೊಡುಗೆ ನೀಡುತ್ತಿದೆ. ಈ ಅಂತರ ಕಡಿಮೆಯಾಗಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ- MSME ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯದಲ್ಲಿ ಜೇನು ಕೃಷಿಕರ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ, ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದರು. ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಕೃಷಿಯ ಜೊತೆಗೆ ಪೂರಕ ಮತ್ತು ಮಿಶ್ರ ಬೇಸಾಯ ಅಳವಡಿಕೆ ಮಾಡಲು ರೈತ ಸಮುದಾಯಕ್ಕೆ ಕರೆ ನೀಡಿದ ಅವರು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ವೆನಿಲಾ ಕೃಷಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳನ್ನು ಅಡಿಕೆ ತೋಟದ ನಡುವೆ ಪೂರಕವಾಗಿ ಅಳವಡಿಸಿಕೊಳ್ಳಬೇಕು. ಪೂರಕ ಮತ್ತು ಮಿಶ್ರ ಬೇಸಾಯ ಕೈಗೊಳ್ಳುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ ಅತ್ಯಂತ ಕಡಿಮೆ ಇರುವುದು ವರದಿಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ. ಆದರೆ, ವರ್ತಕರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವೇಳೆ ಕೃತಕ ರಾಸಾಯನಿಕ ಸೇರ್ಪಡೆ ಮಾಡುವುದು ವ್ಯಾಪಕವಾಗಿದೆ. ಇದರಿಂದ ಬಳಕೆದಾರರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇಂತಹವುಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯ ಎಂದು ತಿಳಿಸಿದರು.
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…