Advertisement
MIRROR FOCUS

ಅಡಿಕೆ ಕೊಳೆರೋಗ ವ್ಯಾಪಕ | ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ | ಸೂಕ್ತ ಪರಿಹಾರಕ್ಕೆ ಒತ್ತಾಯ |

Share
ಈ ಬಾರಿಯ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಆದರೆ ಎಷ್ಟು ನಷ್ಟವಾಗಿದೆ ಹಾಗೂ ಅಡಿಕೆ ಹಾನಿಗೆ ಕಾರಣವೇನು ಎಂಬುದರ ಬಗ್ಗೆ “ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ” ವು ” ದ ರೂರಲ್‌ ಮಿರರ್.ಕಾಂ” ಡಿಜಿಟಲ್‌ ಮೀಡಿಯಾ ಸಹಯೋಗದೊಂದಿಗೆ ಕೊಳೆರೋಗದ ಸಮೀಕ್ಷೆ ಆನ್‌ಲೈನ್‌ ಮೂಲಕ ನಡೆಸಿತ್ತು. ಈ ವರದಿಯ ಪ್ರಕಾರ ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ
ಸಮೀಕ್ಷೆಯಲ್ಲಿ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶಗಳಿಂದ ಕೃಷಿಕರು ಭಾಗವಹಿಸಿದ್ದರು. ದಕ್ಷಿಣ ಕನ್ನಡ , ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು,ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಕೃಷಿಕರು ಕೊಳೆರೋಗದ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟು 503 ಕೃಷಿಕರ ಪ್ರತಿಕ್ರಿಯೆ ಲಭ್ಯವಾಗಿದೆ. ಕೃಷಿಕರು ನೀಡಿದ ಮಾಹಿತಿ ಪ್ರಕಾರ, ಶೇ.95 ಕೃಷಿಕರ ಅಡಿಕೆ ತೋಟದಲ್ಲಿ ಕೊಳೆರೋಗ ಕಂಡು ಬಂದಿದ್ದು ಶೇ. 50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ. ಮಳೆಯ ಕಾರಣದಿಂದಲೇ ಶೇ.84 ರಷ್ಟು ಕೃಷಿಕರಿಗೆ ಔಷಧಿ ಸಿಂಪಡಣೆ ಸಾಧ್ಯವಾಗಿಲ್ಲ.  ಶೇ.47 ರಷ್ಟು ಕೃಷಿಕರಿಗೆ ಒಂದು ಬಾರಿ ಕೊಳೆರೋಗ ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡಣೆ ಸಾಧ್ಯವಾಗಿದೆ. ಶೇ.40 ರಷ್ಟು ಕೃಷಿಕರಿಗೆ ಮಾತ್ರಾ ಎರಡು ಬಾರಿ ಔಷಧಿ ಸಿಂಪಡಣೆ ಆಗಿದೆ. ಬಹುತೇಕ ಕೃಷಿಕರು ಕೊಳೆರೋಗ ನಿಯಂತ್ರಣಕ್ಕೆ ಬೋರ್ಡೋ ಸಿಂಪಡಣೆ ಮಾಡಿದ್ದಾರೆ.ಹಾಗಿದ್ದರೂ ಶೇ.30 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಿನ ಕೃಷಿಕರಿಗೆ ಅಡಿಕೆ ನಷ್ಟವಾಗಿದೆ.  ಕೊಳೆರೋಗ ನಿಯಂತ್ರಣಕ್ಕೆ ಕೃಷಿಕರು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಶೇ.20 ರಷ್ಟು ಕೃಷಿಕರು ಬೋರ್ಡೋ ಜೊತೆ ಈ ಬಾರಿ ಮೆಟಲಾಕ್ಸಿಲ್‌ ಸಿಂಪಡಣೆ ಮಾಡಿದ್ದಾರೆ.  ಈ ಬಾರಿ ಬೇಸಗೆಯಲ್ಲಿ ಶೇ.49 ರಷ್ಟು ಮಂದಿ ಅಡಿಕೆ ನಳ್ಳಿಗೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಅಂತಹವರ ತೋಟದಲ್ಲಿ ಕೂಡಾ ಕೊಳೆರೋಗ ಬಾಧಿಸಿದೆ. ಅಚ್ಚರಿ ಎಂದರೆ ಶೇ.59 ರಷ್ಟು ಕೃಷಿಕರು ತೋಟಗಾರಿಕಾ ಇಲಾಖೆಯ ಮಾಹಿತಿ ಸರಿಯಾಗಿ ಲಭ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಇಡೀ ಸಮೀಕ್ಷೆಯನ್ನು ಗಮನಿಸಿದಾಗ, ಅಡಿಕೆ ಬೆಳೆಗಾರರಿಗೆ ಈ ಬಾರಿ ಒಟ್ಟಾಗಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಕೊಳೆರೋಗದಿಂದ ನಷ್ಟವಾಗಿದೆ. ಬೇರೆ ಯಾವುದೇ ನೆರವು ಸದ್ಯ ಅಡಿಕೆ ಬೆಳೆಗಾರರಿಗೆ ಇಲ್ಲದೇ ಇರುವುದರಿಂದ ತಕ್ಷಣವೇ ಸರ್ಕಾರವು ಈ ಬಗ್ಗೆ ಗಮನಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಅಡಿಕೆ ಬೆಳೆಗಾರರ ಹಿತ ಕಾಪಾಡಲು ದಕ್ಷಿಣ ಕನ್ನಡ ಹಾಗೂ ಅಡಿಕೆ ಬೆಳೆಯುವ ಪ್ರದೇಶದ ಶಾಸಕರು, ಸಂಸದರು ಅಡಿಕೆ ಬೆಳೆಗಾರರ ಧ್ವನಿಯಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago