Advertisement
ಸುದ್ದಿಗಳು

8 ತಿಂಗಳಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Share

ಬೆಂಗಳೂರು ನಗರದಲ್ಲಿ ಕೇವಲ 8 ತಿಂಗಳಿನಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಬಲೆಗೆ ಬಿದ್ದಿರುವುದು, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಬೇರೂರಿಗೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಕಿಡಿಕಾರಿದೆ. ಈ ಬಗ್ಗೆ ಕನ್ನಡಪ್ರಭ  ದಿನಪತ್ರಿಕೆ ವರದಿ ಮಾಡಿದೆ.

ವೈದ್ಯರ ಪತ್ನಿಯಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಡಾ. ಎಸ್. ರಾಮಾನುಜ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಲಂಚ ನೀಡದೆ ಯಾವುದೇ ಕೆಲಸವನ್ನು ಸರ್ಕಾರಿ ಕಚೇರಿಗಳಿಂದ ಮಾಡಿಸಿಕೊಳ್ಳಲು ಸಾಧ್ಯವಿಲ್ಲ ಎಂಬಂತಹ ಭಾವನೆ ಮೂಡತೊಡಗಿದೆ. ಕೆಲ ವ್ಯಕ್ತಿಗಳು ಇಂತಹ ಭ್ರಷ್ಟ್ರ ಅಧಿಕಾರಿಗಳ ಕುರಿತು ಸಹಾನುಭೂತಿ ವ್ಯಕ್ತಪಡಿಸುತ್ತಾರೆ. ಏಕೆಂದರೆ ಅಧಿಕಾರಿಕ್ಕೆ ಬಂದ ವ್ಯಕ್ತಿ ಕೂಡ ಲಂಚ ಕೊಟ್ಟೇ ಸ್ಥಾನ ಗಿಟ್ಟಿಸಿಕೊಂಡಿರುತ್ತಾನೆ. ಆದರೆ, ತಮ್ಮ ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವ ಮಧ್ಯಮ ವರ್ಗದ, ಬಡ ಮತ್ತು ಅಸಹಾಯಕ ಜನರು ಇಲ್ಲಿ ಬಲಿಪಶುಗಳಾಗುತ್ತಿದ್ದಾರೆ. ವ್ಯವಸ್ಥೆಯಲ್ಲಿ ಇವರು ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ನಾವು ಯೋಚಿಸುತ್ತಿಲ್ಲ. ಬೇರೆ ರೀತಿಯಲ್ಲಿ ಹೇಳುವುದಾದರೆ, ಭ್ರಷ್ಟಾಚಾರದ ಕ್ಯಾನ್ಸರ್ ಎಂಬ ಬೀಜವು ಸಾಂವಿಧಾನಿಕ ಉದ್ದೇಶವನ್ನೇ ಕೊಲ್ಲುತ್ತಿದೆ. ಆದ್ದರಿಂದ, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಮತ್ತು ಈ ಪಿಡುಗನ್ನು ಕೊನೆಗಾಣಿಸುವ ಜವಾಬ್ದಾರಿಯನ್ನು ಅರಿತುಕೊಳ್ಳುವ ಸಮಯ ಇದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

3 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

13 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

21 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

1 day ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago