ಸುಡಾನ್‌ನಲ್ಲಿ ಭಾರೀ ಮಳೆಗೆ ಅನಾಹುತ | ಕೊಚ್ಚಿ ಹೋಯ್ತು ಅರ್ಬತ್ ಅಣೆಕಟ್ಟು | 60ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

August 27, 2024
10:19 AM

ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್‌ ಗೇಟ್‌ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು ವೇಳೆ ಅಣೆಕಟ್ಟೆ ಒಡೆದು ಹೋದರೆ ಎನ್ನುವ ಭಯ ಕಾಡಿದ್ದು ಮಾತ್ರ ಸುಳ್ಳಲ್ಲ. ಇದೀಗ ಯುದ್ಧ ಪೀಡಿತ ಸುಡಾನ್‌ನಲ್ಲಿ (Sudan) ಭಾರೀ ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ.  ದುರಂತ ಸಂಭವಿಸುವ ಮೊದಲೇ ಅಣೆಕಟ್ಟು ಕಳಪೆ ಸ್ಥಿತಿಯಲ್ಲಿತ್ತು. ಅಣೆಕಟ್ಟುಗಳು, ರಸ್ತೆಗಳು ಮತ್ತು ಸೇತುವೆಗಳು ಸೇರಿದಂತೆ ಸುಡಾನ್‌ನಲ್ಲಿ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಏಪ್ರಿಲ್ 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ  ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಸರ್ಕಾರ ಈ ಮೊದಲು ತಿಳಿಸಿತ್ತು.

  • ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror