Advertisement
ಸುದ್ದಿಗಳು

ರೈಲ್ವೆ ಇಲಾಖೆಯಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ | ಸಚಿವ ವಿ.ಸೋಮಣ್ಣ

Share

ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ ಡಬ್ಬಲ್ ಲೈನ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ದೇಶದ 24 ರಾಜ್ಯಗಳ 294 ಜಿಲ್ಲಾ ಕೇಂದ್ರಗಳಲ್ಲಿ 104 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಕರ್ನಾಟಕದಲ್ಲಿ ಈಗಾಗಲೇ 10  ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಜೊತೆಗೆ ಪ್ರತಿ ರೈಲಿಗೆ ನಾಲ್ಕರಂತೆ ಹೊಸದಾಗಿ 30 ಸಾವಿರ ಹೊಸ ಬೋಗಿಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.  ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ರೈಲು ಸಂಚಾರ ಆರಂಭಿಸಲಾಗಿದೆ. ಹಾಸನದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರ ತಗ್ಗಿಸಲು ಚಿಂತಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

22 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

22 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

22 hours ago