ಮಂತ್ರಾಲಯ ರಾಯರ ಮಠದ ಕಾಣಿಕೆ ಹುಂಡಿ ಎಣಿಕೆ | ಕೋಟ್ಯಾಂತರ ರೂ ಕಾಣಿಕೆ ಸಂಗ್ರಹ |

October 20, 2022
12:26 PM

ಮಂತ್ರಾಲಯ ರಾಯರ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.

ಗುರುರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಅಕ್ಟೋಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 1,98,17,614 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 4,40,660 ರೂ. ನಾಣ್ಯಗಳು ಹಾಗೂ 1,93,77,054 ರೂ. ನೋಟುಗಳಿವೆ.

ಜೊತೆಗೆ 128 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿಯಿದೆ ಇದು ಸೆ. 29 ರಿಂದ ಅ. 18ರವರೆಗಿನ 20 ದಿನಗಳ ಕಾಣಿಕೆ ಸಂಗ್ರವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ, ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಎಣಿಕೆ ಕಾರ್ಯ ಮುಕ್ತಾಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror