ಮಂತ್ರಾಲಯ ರಾಯರ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
ಗುರುರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಅಕ್ಟೋಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 1,98,17,614 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 4,40,660 ರೂ. ನಾಣ್ಯಗಳು ಹಾಗೂ 1,93,77,054 ರೂ. ನೋಟುಗಳಿವೆ.
ಜೊತೆಗೆ 128 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿಯಿದೆ ಇದು ಸೆ. 29 ರಿಂದ ಅ. 18ರವರೆಗಿನ 20 ದಿನಗಳ ಕಾಣಿಕೆ ಸಂಗ್ರವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ, ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಎಣಿಕೆ ಕಾರ್ಯ ಮುಕ್ತಾಯವಾಗಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…