ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.
ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಉಲ್ಲೇಖಿಸಿದ್ದಾರೆ.
ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ. ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, (RGICL) ಜವಾಬ್ದಾರಿಯನ್ನು ಹೊಂದಿದ್ದು, ಸದರಿ ಕಂಪನಿಯು ಕೆಲವೊಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದು ಅವರ ಆಕ್ಷೇಪಣೆಗಳಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯು ಸಮರ್ಪಕ ಉತ್ತರವನ್ನು ಸಲ್ಲಿಸಿದೆ. ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂಪನಿ ಎತ್ತಿರುವ ಆಕ್ಷೇಪಗಳು ನ್ಯಾಯಸಮ್ಮತವಾಗಿಲ್ಲ, ಅಲ್ಲದೇ ವಿಮೆ ಪರಿಹಾರ ನೀಡಲು ಅನಗತ್ಯ ವಿಳಂಬ ತಂತ್ರ ಅನುಸರಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಗೆ ಒಟ್ಟು 2023-24ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ರೂ.260.94 ಕೋಟಿಗಳನ್ನು ಪಾವತಿಸಲಾಗಿದ್ದು ಅದರಲ್ಲಿ ವಿಮೆ ಕ್ರೈಮ್ ಮೊತ್ತವು ರೂ.132.65 ಕೋಟಿಗಳಾಗಿದ್ದು ಉಳಿದ ರೂ.66.05 ಕೋಟಿಗಳ ಮೊತ್ತವನ್ನು ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಯು ದಿನಾಂಕ: 24.04.2024ರ ನಡವಳಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ. ಹಾವೇರಿ ಜಿಲ್ಲೆಯ ರೈತರು ಈಗಾಗಲೇ ಬರ ಹಾಗೂ ಪ್ರವಾಹದಿಂದ ತತ್ತರಿಸಿದ್ದು, ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ತಾವು ಇದೇ ಆಗಸ್ಟ್ 22 ಎಂದು ನಡೆಯುವ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವಯಕ್ತಿಯ ಆಸಕ್ತಿ ವಹಿಸಿ ರೈತರಿಗೆ ಬೆಳೆ ವಿಮೆ ಪರಿಹಾರ ಕೊಡೆಸಿ ರೈತರ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದಲ್ಲದೇ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಪತ್ರ ಬರೆದಿದ್ದು, ರೈತರಿಗೆ ಬೆಳೆ ಪರಿಹಾರ ಕೊಡಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…