ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

November 27, 2024
9:13 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ.  ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಭೇಟಿಯಾಗಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡದಲ್ಲಿ ಅಡಿಗೆ ಬೆಳೆಗಾರರನ್ನು ತೀವ್ರವಾಗಿ ಬಾಧಿಸಿರುವ ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದ ಗಂಭೀರತೆಯನ್ನು ಕೃಷಿ ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಸಂಸದರು ಇತ್ತೀಚೆಗಷ್ಟೇ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಧಾವಿಸುವಂತೆ ಕೋರಿ ಕೃಷಿ ಸಚಿವರು ಹಾಗೂ ವಾಣಿಜ್ಯ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಕ್ಯಾ. ಚೌಟ ಅವರು ಖುದ್ದು ಕೃಷಿ ಸಚಿವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡದಲ್ಲಿರುವ ಅಡಿಕೆ ಕೃಷಿಕರನ್ನು ಎಲೆಚುಕ್ಕಿ ಹಾಗೂ ಹಳದಿ ಎಳೆ ರೋಗದಿಂದ ಪಾರು ಮಾಡುವುದಕ್ಕೆ ಶಾಶ್ವತ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ.

ಅತಿವೃಷ್ಟಿ, ಪ್ರತಿಕೂಲ ಹವಾಗುಣ ಮುಂತಾದ ಕಾರಣಗಳಿಂದಾಗಿ ಅಡಿಕೆ ಬೆಳೆಗೆ ನಿರಂತರವಾಗಿ ರೋಗಬಾಧೆ ಕಾಣಿಸಿಕೊಂಡು ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದರಿಂದ ಅಡಿಕೆ ಕೃಷಿಕರ ಆದಾಯ ಕುಸಿದು ಆರ್ಥಿಕವಾದ ಸವಾಲುಗಳು ಎದುರಾಗುತ್ತಿರುವ ಬಗ್ಗೆ ಐಸಿಎಆರ್‌ ವರದಿ ಈಗಾಗಲೇ ಎಚ್ಚರಿಸಿದೆ.

ಕ್ಯಾಂಪ್ಕೊ ಮಾಹಿತಿ ಪ್ರಕಾರ, ದ.ಕ.ದಲ್ಲಿ ಸುಮಾರು 24 ಹೆಕ್ಟೇರ್‌ ಅಡಿಕೆ ಬೆಳೆ ಹಾನಿಗೀಡಾಗಿದೆ. ಅಲ್ಲದೆ, ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ಯಾನ್ಸರ್‌ ಸಂಶೋಧನೆಗೆ ಸಂಬಂಧಿಸಿದ ಐಎಆರ್‌ಸಿ ಸಂಸ್ಥೆ ಕೂಡ ಅಡಿಕೆಯನ್ನು ಕ್ಯಾನ್ಸರ್‌ಕಾರಕ ಎಂದಿರುವುದು ಎಂದು ಗುರುತಿಸಿರುವುದು ಕೂಡ ಬೆಳೆಗಾರರ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ, ಸಂಕಷ್ಟದಲ್ಲಿರುವ ಜಿಲ್ಲೆಯ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸುವಂತೆ ಕ್ಯಾ. ಚೌಟ ಮನವಿ ಮಾಡಿದ್ದಾರೆ.

ಕಾಫಿಯನ್ನು ಪರ್ಯಾಯ ಬೆಳೆಯಾಗಿ ಪ್ರೋತ್ಸಾಹಿಸಿ : ದಕ್ಷಿಣ ಕನ್ನಡದ ಹವಾಗುಣವು ಕಾಫಿ ಬೆಳೆಗೆ ಪೂರಕವಾಗಿದ್ದು, ಇಲ್ಲಿ ಕಾಫಿ ಕೃಷಿಗೆ ವಿಪುಲ ಅವಕಾಶಗಳಿವೆ. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಕೂಡ ಇದನ್ನು ಮಲೆನಾಡಿನಂತೆ ದ.ಕ.ದಲ್ಲಿಯ ಕಾಫಿ ಬೆಳೆಯನ್ನು ವಾಣಿಜ್ಯವಾಗಿ ಬೆಳೆಯುವುದಕ್ಕೆ ಇರುವ ಸಾಮರ್ಥ್ಯದ ಬಗ್ಗೆ ಹೇಳಿದೆ. ಆದರೆ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಕಾಫಿ ಬೆಳೆಗೆ ಸಿಗುವ ಪ್ರೋತ್ಸಾಹ, ತಾಂತ್ರಿಕ ನೆರವು ಅಥವಾ ಕಾಫಿ ಬೆಂಬಲಿತ ಸಂಸ್ಥೆಗಳಿಂದ ಸಿಗುತ್ತಿಲ್ಲ. ಹೀಗಾಗಿ, ಕಾಫಿ ಬೋರ್ಡ್‌ ಮೂಲಕ ದಕ್ಷಿಣ ಕನ್ನಡ ಭಾಗದಲ್ಲಿಯೂ ಕಾಫಿ ಬೆಳೆಗಾರರನ್ನು ಉತ್ತೇಜಿಸುವುದಕ್ಕೆ ಸೂಕ್ತ ತಾಂತ್ರಿಕ ಮಾರ್ಗದರ್ಶನ, ಸಬ್ಸಿಡಿ, ಗುಣಮಟ್ಟದ ಸಸಿ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ
January 11, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror