ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ.ಚೌಟ ಒತ್ತಾಯ | ಇಲಾಖಾಧಿಕಾರಿಗಳೊಂದಿಗೆ ತುರ್ತು ಸಭೆ 

December 1, 2025
9:31 PM

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್‌ಡಬ್ಲ್ಯುಬಿಸಿಐಎಸ್‌ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಂಸದ ಕ್ಯಾ. ಚೌಟ ಅವರು ಕಳೆದ ವಾರ ತೋಟಗಾರಿಕ ಇಲಾಖೆ, ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿಳಂಬಕ್ಕೆ ಕಾರಣಗಳನ್ನು ಪರಾಮರ್ಶಿಸಿದ್ದರು. ಆ ಮೂಲಕ ತುರ್ತಾಗಿ ವಿಮಾ ಮೊತ್ತ ಬಿಡುಗಡೆಗೊಳಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೂ ಸೂಚಿಸಿದ್ದಾರೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಾರಿಗೊಳಿಸಿರುವ ಈ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಸಾಮಾನ್ಯವಾಗಿ ನವೆಂಬರ್‌ ತಿಂಗಳಲ್ಲಿ ವಿಮಾ ಕಂಪೆನಿಗಳು ಅರ್ಹ ರೈತರ ಖಾತೆಗಳಿಗೆ ವಿಮಾ ಮೊತ್ತವನ್ನು ಜಮೆ ಮಾಡುತ್ತವೆ. ಆದರೆ, ಮಳೆ ಜಾಸ್ತಿಯಾಗಿರುವ ಕಾರಣ ಹವಾಮಾನ ಆಧಾರಿತ ಬೆಳೆ ನಾಶದ ವರದಿ ಸಲ್ಲಿಕೆಯ ಪ್ರಕ್ರಿಯೆಯಲ್ಲಿ ವ್ಯತ್ಯಾಸವಾಗಿದೆ ಎಂಬುವುದಾಗಿ ಇಲಾಖಾಧಿಕಾರಿಗಳು ಹೇಳಿದ್ದಾರೆ. ಆದರೆ, ನವೆಂಬರ್‌ ಮುಗಿದು ಡಿಸೆಂಬರ್‌ ತಿಂಗಳು ಆರಂಭಗೊಂಡಿದ್ದರೂ ಇನ್ನೂ ವಿಮಾ ಕಂಪೆನಿಗಳಿಂದ ರೈತರ ಖಾತೆಗಳಿಗೆ ಹಣ ಜಮೆ ಆಗದೆ ಇರುವುದರಿಂದ ಫಲಾನುಭವಿಗಳಿಗೆ ತೀವ್ರ ಆರ್ಥಿಕ ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಅದಷ್ಟು ರೈತರಿಗೆ ಅನುಕೂಲವಾಗುವಂತೆ  ವಿಮಾ ಮೊತ್ತ ಬಿಡುಗಡೆ ಮಾಡಲು ಫಾಲೋ ಆಪ್ ಮಾಡಬೇಕು ಎಂದು ಸಭೆಯಲ್ಲಿ ಕ್ಯಾ. ಚೌಟ ನಿರ್ದೇಶಿಸಿದ್ದಾರೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror