ಗ್ರಾಮೀಣ ಭಾಗದ ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ 

November 20, 2025
9:31 PM

ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.

ಸುಳ್ಯ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಕ್ರಿಯಿಸಿರುವ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಭಾಗದ ಜನರನ್ನು ತಲುಪುವುದು; ಆ ಮೂಲಕ ಅವರ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂಬ ಆಶಯ ನನ್ನದು. ಜನರ ಸಮಸ್ಯೆಗಳು- ಸವಾಲುಗಳಿಗೆ ಖುದ್ದು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ‌ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬಕೋಡಿ, ಕಿಶೋರ್ ಶಿರಾಡಿ, ವಿನಯ್ ಮುಳುಗಾಡು, ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೇಶವ ಭಟ್ ಮುಳಿಯ, ಶ್ರೀಕಾಂತ್ ಮಾವಿನಕಟ್ಟೆ, ಸೋಮಶೇಖರ್ ಕಟ್ಟೆಮನೆ, ಚಂದ್ರಹಾಸ ಶಿವಾಲ , ಎಟಿ ಕುಸುಮಾಧರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror