MIRROR FOCUS

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಹಾಗೂ ಅಡಿಕೆ ಬೆಳೆಯುವ ಪ್ರದೇಶದ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಗಮನ ಸೆಳೆದರು.ಮುಖ್ಯವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16,000 ಹೆಕ್ಟೇರ್ ಕೃಷಿ ಪ್ರದೇಶದ ಅಡಿಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅದರಲ್ಲಿ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನು ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿ ರೈತರ ಈ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಬ್ರಿಜೇಶ್‌ ಚೌಟ ಮಾಡಿದರು.

During a session in the Lok Sabha, Dakshina Kannada MP Brijesh Chowta highlighted the challenges being experienced by Arecanut growers in Dakshina Kannada and other Arecanut-growing regions. He called for urgent action to be taken, particularly in addressing the issue of Arecanut yellow leaf disease.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

15 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

22 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

23 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

1 day ago