Advertisement
MIRROR FOCUS

ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |

Share

ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ (NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ.…..ಮುಂದೆ ಓದಿ….

ಸಚಿವ ಚಿರಾಗ್‌ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಆಹಾರ ಸಂಸ್ಕರಣಾ ಉದ್ಯಮ ಸ್ಥಾಪನೆಗೆ ಪೂರಕವಾಗಿರುವ ಅವಕಾಶ ಹಾಗೂ ಇಕೋ-ಸಿಸ್ಟಮ್‌ ಅಳವಡಿಕೆ ಕುರಿತು ಚರ್ಚಿಸಿ ಸಾಧ್ಯಾ-ಸಾಧ್ಯತೆಗಳ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಅಡಿಕೆ, ತೆಂಗು ಸೇರಿ ಹಲವಾರು ತೋಟಗಾರಿಕಾ ಬೆಳೆಗಳಿವೆ. ಈ ಹಿನ್ನಲೆ ಜಿಲ್ಲೆಯಲ್ಲಿ NIFTEM ಸಂಯೋಜಿತ ಸೆಂಟರ್‌ ಸ್ಥಾಪಿಸುವುದರಿಂದ ಆಹಾರ ಸಂಸ್ಕರಣಾ ತಂತ್ರಜ್ಞಾನಗಳ ಬಗ್ಗೆ ಇಲ್ಲಿನ ರೈತರು ಹಾಗೂ ಉದ್ದಿಮೆದಾರರಿಗೆ ಮಾಹಿತಿ, ಕೌಶಲ್ಯ ಅಭಿವೃದ್ಧಿಗೆ ಅನುಕೂಲವಾಗಲಿದೆ. ಜತೆಗೆ, ಸ್ಥಳೀಯ ಈ ವಲಯದ ಉದ್ದಿಮೆದಾರರು, ಮೀನು ಸಂಸ್ಕರಣಾ ವಲಯದವರು ಹಾಗೂ ರೈತರಿಗೆ NIFTEM ಸಹಯೋಗದಲ್ಲಿ ಅಗತ್ಯ ಮಾಹಿತಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕೃಷಿ ಉತ್ಪನ್ನಗಳ ಸಂಸ್ಕರಣೆಗಳಿಗೆ ಅನುಕೂಲವಾಗುವಂತೆ ಆಗ್ರೋ ಪ್ರೊಸೆಸಿಂಗ್‌ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಬೇಕು. ಇದರಿಂದ ಆಗ್ರೋ ಉದ್ಯಮಶೀಲನೆ ಬೆಳೆಸುವ ಜತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಬಹುದು. ಜತೆಗೆ, ಕೋಲ್ಡ್‌ ಚೈನ್‌ ಲಾಜಿಸ್ಟಿಕ್ಸ್‌, ಕೌಶಲ್ಯಾಧಾರಿತ ಕಾರ್ಮಿಕರ ಕೊರತೆ ಸೇರಿ ಆಹಾರ ಸಂಸ್ಕರಣಾ ಉದ್ಯಮ ವಲಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೂ ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್‌ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬೇಕೆಂದು ಕ್ಯಾ. ಚೌಟ ಅವರು ಸಚಿವರಿಗೆ ನೀಡಿದ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

Dakshina Kannada MP Captain Brijesh Chowta met Union Minister of Food Processing Industries Shri Chirag Paswan in Delhi today and sought his support to transform Dakshina Kannada into a food processing hub of the region.

Captain Brijesh Chowta gave a letter seeking the support of the Union Minister while highlighting the immense potential of Dakshina Kannada and urged him to initiate action in this direction.

In the letter, Captain Brijesh Chowta, apart from listing out the various prospects and available resources in the region, also proposed various key initiatives to turn the coastal district into a hub of both agro and fishing based food processing activities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

13 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago