ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

July 30, 2025
9:03 PM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು  ರೈತರ ಕಾರ್ಮಿಕರ ಜೀವ ಹಾನಿ ಜೊತೆಗೆ ಬೆಳೆಗಳನ್ನು ನಾಶಮಾಡುತ್ತಿವೆ. ಈ ಬಗ್ಗೆ ಸಚಿವರ ಗಮನಕ್ಕೆ  ತರಲಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಆನೆ ದೊಡ್ಡಿಗಳ ನಿರ್ಮಾಣ ಮಾಡಿ ಶಾಶ್ವತ ಪರಿಹಾರದ ಯೋಜನೆ ರೂಪಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಕಳೆದ 5 ದಿನಗಳ ಹಿಂದೆ ಜಿಲ್ಲೆಯ ಬಾಳೆಹೊನ್ನೂರು ಬಳಿ ಇಬ್ಬರನ್ನು ಬಲಿ ಪಡೆದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದು ಬಿಳುಕೊಪ್ಪ ಅರಣ್ಯದಲ್ಲಿ 14 ವರ್ಷದ ಕಾಡಾನೆಯನ್ನು ಸೆರೆ ಹಿಡಿದು ಸಕ್ರೆಬೈಲು ಆನೆ ಶಿಬಿರಕ್ಕೆ  ಸ್ಥಳಾಂತರಿಸಲಾಗಿದೆ.  ಈ ಭಾಗದಲ್ಲಿ ಮತ್ತೊಂದು ಕಾಡಾನೆ ಸಂಚರಿಸುತ್ತಿದ್ದು ನಾಳೆಯಿಂದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror