ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ | ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

August 24, 2024
9:39 PM

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿ ಕಾರಣದಿಂದ ಪ್ರಾಕೃತಿಕ ಭೂ ವಿಕೋಪಗಳು ಜರುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಾರಿಯ ಅತಿವೃಷ್ಟಿಯ ಪ್ರಭಾವ ಜಿಲ್ಲೆಯ ಬಹುತೇಕ ಎಲ್ಲಾ ವಿಧದ ಬೆಳೆಯ ಮೇಲು ಉಂಟಾಗಿದೆ. ವಾಡಿಕೆಗಿಂತ ಅಧಿಕ ಮಳೆಯಿಂದಾಗಿ ಜಿಲ್ಲೆಯ ರೈತ ವರ್ಗದ ಜೀವನಾಡಿಯಾದ ಅಡಿಕೆ ಬೆಳೆ ಮತ್ತು ಕಾಳುಮೆಣಸಿಗೆ ಕೊಳೆ ರೋಗವು ತಗುಲಿದ ಪರಿಣಾಮ ತೀವ್ರ ನಷ್ಟ ಉಂಟಾಗಿದೆ. ಎಲೆಚುಕ್ಕೆ ರೋಗ ಭಾದೆಯಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಮರಗಳು ಈಗಾಗಲೇ ನಶಿಸುತ್ತಿದ್ದು, ಕೊಳೆ ರೋಗವು ರೈತರ ಜೀವನದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ಹೋಬಳಿವಾರು ಅಡಿಕೆ ಬೆಳೆ ಸಮೀಕ್ಷೆ ನಡೆಸಲು ಆದೇಶಿಸಿ, ಬೆಳೆಗಳ ಸ್ಥಿತಿಗತಿಯ ಬಗ್ಗೆ ವಸ್ತುನಿಷ್ಠ ವರದಿ ಪಡೆದು, ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಬೆಳೆ ಪರಿಹಾರ ಸಹಾಯಧನ ಮತ್ತು ಔಷಧಿ ಸಿಂಪಡನೆಗೆ ಅಗತ್ಯವಿರುವ ಮೈಲುತುತ್ತ ಸಹಾಯಧನ ನೀಡಬೇಕೆಂದು ಅವರು ಪತದ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Member of Parliament Vishweshwar Hegade Kageri has requested the state government to provide crop compensation subsidy and mailututa subsidy to Arecanut farmers in the state.

  • D D
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror