Advertisement
MIRROR FOCUS

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

Share

ಅಡಿಕೆ ಕ್ಯಾನ್ಸರ್‌ಕಾರಕವಲ್ಲ, ಹೀಗಾಗಿ ಅಡಿಕೆಯನ್ನು  Group-1 ಕ್ಯಾನ್ಸರ್ ಕಾರಕ ಪಟ್ಟಿಯಲ್ಲಿ ಸೇರಿಸಿರುವ ನಿರ್ಧಾರವನ್ನು ಮರುಪರಿಶೀಲಿಸಲು ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು International Agency for Research on Cancer (IARC) ಗೆ ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕೃತವಾಗಿ ಮನವಿ ಮಾಡಿದ್ದಾರೆ.

WHO South-East Asia Regional Office ಗೆ ಬರೆದಿರುವ ಪತ್ರದಲ್ಲಿ, ಅಡಿಕೆಯನ್ನು Group-1 carcinogen ಪಟ್ಟಿಯಲ್ಲಿ ಸೇರಿಸಿರುವ ವರ್ಗೀಕರಣವನ್ನು ವೈಜ್ಞಾನಿಕ ಆಧಾರದ ಮೇಲೆ ಮರುಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಅಡಿಕೆ ಭಾರತ ಸೇರಿದಂತೆ ದಕ್ಷಿಣ ಮತ್ತು ದಕ್ಷಿಣ-ಪೂರ್ವ ಏಷ್ಯಾದ ದೇಶಗಳಲ್ಲಿ ವ್ಯಾಪಕವಾಗಿ ಬೆಳೆದಿದ್ದು, ಲಕ್ಷಾಂತರ ಸಣ್ಣ ಮತ್ತು ಅಂಚಿನ ರೈತರ ಜೀವನಾಧಾರವಾಗಿದೆ ಎಂದು ತಿಳಿಸಿದ್ದಾರೆ. ಅಡಿಕೆ ಗ್ರಾಮೀಣ ಆರ್ಥಿಕತೆ ಮತ್ತು ಸಾಮಾಜಿಕ-ಸಾಂಸ್ಕೃತಿಕ ಜೀವನದ ಪ್ರಮುಖ ಭಾಗವಾಗಿದ್ದು, ಕ್ಯಾನ್ಸರ್ ಕಾರಕ ವರ್ಗೀಕರಣವು ಸಾರ್ವಜನಿಕ ಆರೋಗ್ಯ, ಆರ್ಥಿಕತೆ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ.

ಇತ್ತೀಚಿನ ವೈಜ್ಞಾನಿಕ ಅಧ್ಯಯನಗಳು ಮತ್ತು ಸಂಶೋಧನಾ ವರದಿಗಳು, ಅಡಿಕೆಯನ್ನು ಅದರ ನೈಸರ್ಗಿಕ ರೂಪದಲ್ಲಿ ಸೇವಿಸಿದಾಗ ಕ್ಯಾನ್ಸರ್ ಕಾರಕ ಎಂದು ಸ್ಪಷ್ಟವಾಗಿ ದೃಢಪಡಿಸಲು ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ಸೂಚಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ. ಭಾರತ ಸರ್ಕಾರವು ICAR, ICMR ಸೇರಿದಂತೆ ಪ್ರಮುಖ ಸಂಶೋಧನಾ ಸಂಸ್ಥೆಗಳ ಮೂಲಕ ಅಡಿಕೆಯ ಸುರಕ್ಷತೆ ಕುರಿತು ಸಮಗ್ರ ಸಂಶೋಧನೆ ಪ್ರಾರಂಭಿಸಿದ್ದು, ಅಂತಿಮ ವೈಜ್ಞಾನಿಕ ಫಲಿತಾಂಶಗಳು ಲಭ್ಯವಾಗುವವರೆಗೆ ತೀರ್ಮಾನಾತ್ಮಕ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡಿಕೆಯ carcinogenic classification ಅನ್ನು ಮರುಪರಿಶೀಲಿಸಿ Group-2 ವಿಭಾಗಕ್ಕೆ ವರ್ಗೀಕರಿಸುವ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಅವರು WHO ಮತ್ತು IARCಗೆ ಮನವಿ ಮಾಡಿದ್ದಾರೆ. ಜೊತೆಗೆ ಭಾರತ ಸೇರಿದಂತೆ ಅಡಿಕೆ ಉತ್ಪಾದಿಸುವ ದೇಶಗಳ ತಜ್ಞರನ್ನು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸೇರಿಸಿ ಸಮಗ್ರ ವೈಜ್ಞಾನಿಕ ಅಧ್ಯಯನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Uttara Kannada MP Vishweshwar Hegde Kageri has written to WHO and IARC requesting reconsideration of arecanut’s classification as a Group-1 carcinogen. He highlighted its importance to farmers and rural economy and stressed the need for scientific re-evaluation based on ongoing research in India.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

3 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago