ಕೇಂದ್ರ ಸರ್ಕಾರ ಸ್ವಾಮ್ಯದ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯು ಹಸಿರು ವಲಯ ನಿರ್ಮಾಣ ಸಂಬಂಧ 27 ಎಕರೆ ಭೂಸ್ವಾಧೀನಕ್ಕೆ ಭೂಮಾಲಿಕರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಪ್ರತಿ ಎಕರೆಗೆ 80 ಲಕ್ಷ ರೂಪಾಯಿ ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರೂಪಾಯಿ ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು ಎಂಆರ್‌ಪಿಎಲ್ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಮಾತನಾಡಿ, ಎಂಆರ್‌ಪಿಲ್ ಸಲ್ಲಿಸಿರುವ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…