ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು 2023ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‍ಗೆ 11,750 ರೂ.ಗಳಂತೆ ಖರೀದಿಗೆ ಜಿಲ್ಲೆಯಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.
ಖರೀದಿಗೆ ಅಗತ್ಯವಿರುವ ದಾಖಲೆಗಳ ವಿವರ: ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು 2023ರ ಮಾರ್ಚ್ 12ರೊಳಗೆ ನೋಂದಾಯಿಸಿ ನೋಂದಣಿ ಚೀಟಿ ಪಡೆಯಬೇಕು. 2022-23ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು, ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಪ್ರೂಟ್ಸ್‍ನಲ್ಲಿ ಯಾವುದಾದರು ಮಾಹಿತಿ ಲಭ್ಯವಿಲ್ಲದಿದ್ದಲ್ಲಿ, ತಪ್ಪಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರ್ ಕಾರ್ಡ್‍ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ. ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರುವುದು. ಪ್ರತಿ ಎಕರೆಗೆ 6 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ನಿಗಧಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 20ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಉಂಡೆ ಕೊಬ್ಬರಿ ಉತ್ಪನ್ನವನ್ನು 2023ರ ಜುಲೈ27ರ ವರೆಗೆ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ತಾಲೂಕು, ಖರೀದಿ ಕೇಂದ್ರ ಹಾಗೂ ಸ್ಥಳ, ಖರೀದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವವರ ಹೆಸರು ಹಾಗೂ ಅವರ ಮೊಬೈಲ್ ಸಂಖ್ಯೆಯ ವಿವರಗಳು ಕ್ರಮವಾಗಿ ಇಂತಿವೆ:
ಮಂಗಳೂರು ತಾಲೂಕಿನ ಮಂಗಳೂರಿನ ಪದು ಶಕ್ತಿನಗರ ಕೇಂದ್ರದ ವಿರೇಂದ್ರ ಎಸ್-9663758820, ಮೂಡಬಿದ್ರೆ ತಾಲೂಕಿನ ಮೂಡಬಿದ್ರೆಯ ಅಲಂಗಾರು ಕೇಂದ್ರದ ಚೇತನ್ ನಾಯಕ್ ಎಂ.ಎಸ್-9739392423, ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಆವರಣ ಕೇಂದ್ರದ ವಿರೇಂದ್ರ ಎಸ್. – 9663758820, ಬೆಳ್ತಂಗಡಿ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ, ಪುತ್ತೂರು ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ ಹಾಗೂ ಸುಳ್ಯ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರದ ಸಂಪತ್ – 9449864424, ಮಂಗಳೂರು ತಾಲೂಕಿನ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣ ಕೇಂದ್ರದ ಚೇತನ್ ನಾಯಕ್ ಎಂ.ಎಸ್. – 9739392423 ಅವರನ್ನು ಸಂಪರ್ಕಿಸಬಹುದು.20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…