2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದ್ದಾರೆ. ಜಿಲ್ಲಾ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 9 ಕೇಂದ್ರಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್. ಎ ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್‌ಗಳನ್ನು ನೇಮಕ ಮಾಡಬೇಕು. ಸರ್ಕಾರದ ಆದೇಶಾನುಸಾರ ಪ್ರತಿ ಎಕರೆಗೆ ೪ ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…