ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ಎ. 25ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ 7550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದ ಪ್ರೊತ್ಸಾಹಧನ ಪ್ರತಿ ಕ್ವಿಂಟಾಲ್‌ಗೆ 450 ರೂಪಾಯಿ ಸೇರಿದಂತೆ ಒಟ್ಟು 8000 ರೂಪಾಯಿ ಪ್ರತಿ ಕ್ವಿಂಟಾಲ್‌ಗೆ ಖರೀದಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‌ಪಿಓ ಸಂಘಗಳಲ್ಲಿ ನೋಂದಣಿ ಮಾಡಿಸಿ ತೊಗರಿ ಮಾರಾಟ ಮಾಡಿ, ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel