ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21 ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18 ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8682 ರೂಪಾಯಿ ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…
ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…