ಬೆಂಬಲಬೆಲೆ ಯೋಜನೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗಾ, ಗದಗ್, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬೆಂಬಲಬೆಲೆಯಡಿ ಶೇಂಗಾ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು. ಪ್ರಸ್ತುತ, ನೋಂದಣಿ ಅವಧಿಯನ್ನು ಈ ತಿಂಗಳ 20 ರವರೆಗೆ ಹಾಗೂ ಖರೀದಿ ಅವಧಿಯನ್ನು ಈ ತಿಂಗಳ 22 ರವರೆಗೆ ವಿಸ್ತರಿಸಲಾಗಿದೆ. ಶೇಂಗಾ ಬೆಲೆಯನ್ನು ಕ್ವಿಂಟಲ್‌ಗೆ 6783 ರೂಪಾಯಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಶೇಂಗಾ ಖರೀದಿ ಅವಧಿ ವಿಸ್ತರಣೆಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ತಿಂಗಳ 22 ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel