ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಸರ್ಕಾರ | 422 ರೂಪಾಯಿ ಏರಿಕೆ |

December 21, 2024
6:32 AM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA)ಯು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಉಂಡೆ ಕೊಬ್ಬರಿಗೆ 12,100 ರೂಪಾಯಿ ಹಾಗೂ ಸಾಮಾನ್ಯ ಕೊಬ್ಬರಿಗೆ 11,582 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದಕ್ಕಾಗಿ ₹855 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.

ಉಂಡೆ ಕೊಬ್ಬರಿ ದರವನ್ನು 100 ರೂಪಾಯಿ ಏರಿಕೆ ಮಾಡಿ 12100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಕೊಬ್ಬರಿಗೆ 422 ರೂಪಾಯಿ ಹೆಚ್ಚಳ ಮಾಡಿ ಕ್ವಿಂಟಾಲ್‌ಗೆ 11582 ರೂಪಾಯಿಗೆ ಏರಿಕೆ ಮಾಡಲಾಗಿದೆ.

ತೆಂಗಿನ ರೈತರಿಗೆ ಉತ್ತಮ ಆದಾಯವನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ತೆಂಗಿನ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ಬೇಡಿಕೆಯನ್ನು ಪೂರೈಸಲು  ಉತ್ಪಾದನೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ  ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಗಳು ನೋಡಲ್‌ ಏಜೆನ್ಸಿಯಾಗಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror