ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA)ಯು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಉಂಡೆ ಕೊಬ್ಬರಿಗೆ 12,100 ರೂಪಾಯಿ ಹಾಗೂ ಸಾಮಾನ್ಯ ಕೊಬ್ಬರಿಗೆ 11,582 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದಕ್ಕಾಗಿ ₹855 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.
ಉಂಡೆ ಕೊಬ್ಬರಿ ದರವನ್ನು 100 ರೂಪಾಯಿ ಏರಿಕೆ ಮಾಡಿ 12100 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಕೊಬ್ಬರಿಗೆ 422 ರೂಪಾಯಿ ಹೆಚ್ಚಳ ಮಾಡಿ ಕ್ವಿಂಟಾಲ್‌ಗೆ 11582 ರೂಪಾಯಿಗೆ ಏರಿಕೆ ಮಾಡಲಾಗಿದೆ.
ತೆಂಗಿನ ರೈತರಿಗೆ ಉತ್ತಮ ಆದಾಯವನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ತೆಂಗಿನ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ಬೇಡಿಕೆಯನ್ನು ಪೂರೈಸಲು ಉತ್ಪಾದನೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಗಳು ನೋಡಲ್ ಏಜೆನ್ಸಿಯಾಗಿರುತ್ತದೆ.
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…
ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ…
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ…
ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ.…