ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550 ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್‌ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…