ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

April 21, 2026
7:31 AM
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ ಜಪ್ತಿ ಮಾಡಲಾಗಿದೆ. ನಿಯಮ ಉಲ್ಲಂಘನೆಗಾಗಿ ₹99,999 ದಂಡ ವಿಧಿಸಲಾಗಿದೆ.

ಕೋಲಾರದಲ್ಲಿ ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶ ನೀಡಿರುವ ಜಿಲ್ಲಾಡಳಿತ, ಮುಳಬಾಗಿಲಿನ ಪ್ರತಿಷ್ಠಿತ ಹೋಟೆಲ್ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತಾ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಭಾರಿ ದಂಡ ವಿಧಿಸಲಾಗಿದೆ.

ಜಿಲ್ಲಾಧಿಕಾರಿ ಡಾ. ಎಂ ಆರ್‌ ರವಿ ಅವರ ಆದೇಶದ ಮೇರೆಗೆ, ಮುಳಬಾಗಿಲು ತಾಲ್ಲೂಕು ದಂಡಾಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸ್ ತಂಡ ಜಂಟಿಯಾಗಿ ದಾಳಿ ನಡೆಸಿದರು.

ಈ ವೇಳೆ ಹೋಟೆಲ್‌ನಿಂದ ಸುಮಾರು 30 ಲೀಟರ್ ಅವಧಿ ಮೀರಿದ ತುಪ್ಪವನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ಆಹಾರ ಸುರಕ್ಷತಾ ನಿಯಮಗಳ ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಿ, ಹೋಟೆಲ್‌ಗೆ ₹99,999 ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ಸರ್ಕಾರಿ ಖಜಾನೆಗೆ ಜಮೆ ಮಾಡಲಾಗಿದೆ.

ಇದಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ನಡೆಯದಂತೆ ನೋಡಿಕೊಳ್ಳುವುದಾಗಿ ಹೋಟೆಲ್ ವ್ಯವಸ್ಥಾಪಕರಿಂದ ಲಿಖಿತ ಮುಚ್ಚಳಿಕೆಯನ್ನು ಅಧಿಕಾರಿಗಳು ಪಡೆದಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Kolar conducted a raid on a hotel in Mulabagilu and seized 30 liters of expired ghee. A fine of ₹99,999 was imposed for violating food safety norms.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror