Advertisement
ಸುದ್ದಿಗಳು

ಮುಳಿಯ ಗಾನರಥ | ಕರೋಕೆ ಹಾಡುಗಳ ಗಾಯನ ಸ್ಪರ್ಧೆ | 6ನೇ ಸುತ್ತಿನ ಆಡಿಷನ್ ಫೆ.19ರಂದು ಈಶ್ವರಮಂಗಲದಲ್ಲಿ |

Share

ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿ ಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಐದನೇ ಆಡಿಷನ್ ರೌಂಡ್ ಫೆ.19ರಂದು ಈಶ್ವರಮಂಗಲದಲ್ಲಿ ನಡೆಯಲಿದೆ.

ಈಶ್ವರಮಂಗಲದ ಆರೋಗ್ಯವರ್ಧಿನೀ ಚಿಕಿತ್ಸಾಲಯದ ಆವರಣದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. 12 ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕರ ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ.

 

ಕನ್ನಡ, ಹಿಂದಿ ತುಳು ಹಾಗೂ ಮಲಯಾಳಂ ಸೇರಿದಂತೆ 4 ಭಾಷೆಗಳ ಹಾಡುಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆಡಿಷನ್ ನೋಂದಾವಣೆಗಾಗಿ 9743175916 ಗೆ ಕರೆ ಮಾಡಬಹುದಾಗಿದೆ. ಈ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ನ ಫೇಸ್‍ಬುಕ್ ಮುಖಾಂತರವೂ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ನಿಬಂಧನೆಗಳು ಹೀಗಿವೆ:

ಮುಳಿಯ ಗಾನರಥ ಇದೊಂದು ಪುತ್ತೂರು ತಾಲೂಕಿನ ಉದಯೋನ್ಮುಖ ಗಾಯಕ – ಗಾಯಕಿಯವರಿಗೆ ವೇದಿಕೆ ಸೃಷ್ಟಿ ಮಾಡುವ ಅಪೂರ್ವ ಕಾರ್ಯಕ್ರಮವಾಗಿದೆ. ಇದರ ನಿವಂಧನೆಗಳು ಹೀಗಿವೆ.

ಸ್ಪರ್ಧೆಯ ನಿಬಂಧನೆಗಳು :

1. ವಯೋಮಿತಿ ಆಧಾರಕ್ಕಾಗಿ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ.

2. ಪ್ರೇಕ್ಷಕರಿಗೆ ಕಾರ್ಯಕ್ರಮ ವೀಕ್ಷಿಸಲು ಆನ್‍ಲೈನ್‍ನಲ್ಲಿ ವ್ಯವಸ್ಥೆ ಮಾಡಲಾಗುವುದು.

3. ಕರೋಕೆ ಗಾಯನದಲ್ಲಿ ಹಾಡುವಾಗ ಎಲ್ಲಿಯೂ ಕರೋಕೆ ತಪ್ಪದಂತೆ ಹಾಡಬೇಕು.

4. ಕರೋಕೆ ಗಾಯನ ಹಾಡುವವರು ಕರೋಕೆ ಇರುವ ಶೃತಿಯಲ್ಲಿ ಹಾಡಬೇಕು.

5. ಕರೋಕೆ ಗಾಯನದಲ್ಲಿ ತಾಳಬದ್ಧವಾಗಿ ಹಾಡಬೇಕು, ಸಾಹಿತ್ಯ ತಪ್ಪಾಗಿ ಇರಬಾರದು.

6. ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು.

7. ಚಿಕ್ಕಮಕ್ಕಳೊಂದಿಗೆ ಪೋಷಕರು ಹಾಜರಿರತಕ್ಕದ್ದು.

8. ವಯೋಮಿತಿ 12 ವಯಸ್ಸಿನಿಂದ 21ರವರೆಗೆ ಹಾಗೂ ಮೇಲ್ಪಟ್ಟ ವಯಸ್ಸಿನವರನ್ನು ಸಾರ್ವಜನಿಕ ವಿಭಾಗವೆಂದು 2 ವಿಭಾಗ ಮಾಡಲಾಗುವುದು.

9. ಆಡಿಷನ್‍ನಲ್ಲಿ 50 ಸ್ಪರ್ಧಿಗಳು ಮೇಲ್ಪಟ್ಟು ಇದ್ದಲ್ಲಿ ಹಾಡಿನ ಪಲ್ಲವಿ ಮತ್ತು ಪ್ರಥಮ ಚರಣ ಮಾತ್ರ ಹಾಡಲು ಅವಕಾಶ ನೀಡಲಾಗುವುದು.

10. ಕರೋಕೆ ಹಾಡುವ ಸ್ಫರ್ಧಿಗಳು ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಗಳ ಹಾಡುಗಳನ್ನು ಹಾಡಲು ಅವಕಾಶ ಇರುತ್ತದೆ.

11. ಆಡಿಷನ್‍ನಲ್ಲಿ ಭಾಗವಹಿಸಿದ ಪ್ರತೀಯೊಬ್ಬ ಸ್ಪರ್ಧಿಗೂ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.

12. ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳಲ್ಲಿ ಆಯ್ಕೆಯಾದವರಿಗೆ ಸಮಿ ಫಿನಾಲೆ ಸುತ್ತಿನಲ್ಲಿ ಸ್ಪರ್ಧಿಸಲು ಅವಕಾಶ.

13. ಗ್ರ್ಯಾಂಡ್ ಫಿನಾಲೆಯ ವಿಜೇತರನ್ನು ಪುತ್ತೂರು ಮುಳಿಯ ಗಾನ ಕೋಗಿಲೆ ಎಂಬ ಬಿರುದು ನೀಡಿ ಪುರಸ್ಕರಿಸಲಾಗುವುದು.

14. ನುರಿತ ಹಿನ್ನಲೆ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮ.

15. ಕೋವಿಡ್ ನಿಯಮವನ್ನು ಪಾಲಿಸುವಲ್ಲಿ ಎಲ್ಲರೂ ಸಹಕರಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಪ್ರವೀಣ್ ಮತ್ತು ಆನಂದ್ ಕುಲಾಲ್ ಅವರನ್ನು 9743175916 ಮತ್ತು 9844602916 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

11 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

23 minutes ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

36 minutes ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

49 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

10 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago