ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.
ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಹೇಳಿದರು.
ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…