ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ | ಸಾರ್ವಜನಿಕರಿಗೆ 3000 ಕ್ಕೂ ಅಧಿಕ ಗಿಡಗಳ ವಿತರಣೆ

June 6, 2024
11:45 AM
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ 3000 ಗಿಡಗಳನ್ನು ಗ್ರಾಹಕರಿಗೆ ವಿತರಿಸಲಾಯಿತು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.

ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ 3000 ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.

ಮುಳಿಯ ಜ್ಯುವೆಲ್ಸ್ ಸಂಸ್ಥೆ ಕೇವಲಚಿನ್ನಾಭರಣಗಳ ಮಾರಾಟದಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ, ಬದಲಾಗಿ ಮುಳಿಯ ಫೌಂಡೇಶನ್, ಮುಳಿಯ ಪ್ರಾಪರ್ಟೀಸ್‌ನಂತಹ ಸಂಸ್ಥೆಗಳ ಮೂಲಕ ಸಾರ್ವಜನಿಕ ಕಾಳಜಿಯ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದು, ಈ ಕಾರ್ಯಕ್ರಮಗಳ ಸಾಲಿನಲ್ಲಿ ವೃಕ್ಷಾರೋಪಣವೂ ಸೇರಿದೆ.

ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಯತೀಶ್, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

On the occasion of World Environment Day, saplings were distributed to customers at Muliya Jewels premises in Puttur.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror