ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ, ನಾಗ್ಪುರದಲ್ಲೂ ಭಾರಿ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ 220 ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.ಮಳೆಯ ಅಬ್ಬರ ಮುಂದುವರಿದಿದೆ.
ಮುಂಬಯಿ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿತ್ತು. ಈ ನಡುವೆಯೇ ಭಾರಿ ಮಳೆ ಸುರಿದಿದೆ. ಇನ್ನೀಗ ಆರೆಂಜ್ ಎಲರ್ಟ್ ತಿಳಿಸಲಾಗಿದೆ. ಮೊದಲ ದಿನದ ಮಳೆಗೆ ಮುಂಬಯಿಯ ಹಲವಾರು ಭಾಗಗಳು ಜಲಾವೃತಗೊಂಡವು . ಮಳೆಯ ಅವಘಡ ಹಾಗೂ ಸಮಸ್ಯೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಳೆಯ ಕಾರಣದಿಂದ ಮುಂಬಯಿಯ ವಿಲೆ ಪಾರ್ಲೆಯ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಐದು ಮಂದಿಗೆ ಗಾಯಗಳು ವರದಿಯಾಗಿವೆ. ಶನಿವಾರ ಸುರಿದ ಭಾರೀ ಮಳೆಯ ನಡುವೆ, ಶನಿವಾರ ಸಂಜೆ ಗೋವಂಡಿಯ ಶಿವಾಜಿ ನಗರದಲ್ಲಿ ತುಂಬಿ ಹರಿಯುವ ಚರಂಡಿಯ ಮ್ಯಾನ್‌ಹೋಲ್‌ಗೆ ಬಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಹೆಚ್ಚಿನ ಭಾಗಗಳಲ್ಲಿ ಸುರಿದ ಭಾರೀ ಮಳೆಯ ಕಾರಣದಿಂದ ನಗರದ ಕಾಲುವೆಗಳು ತುಂಬಿ ಹರಿಯುತ್ತಿವೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…