Advertisement
ಸುದ್ದಿಗಳು

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

Share

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ ದಿಕ್ಕಿನತ್ತ ಚಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಪರಿಣಾಮವಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಚಂಡಮಾರುತದ ಪ್ರಭಾವದಿಂದ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಕೆಲವೊಮ್ಮೆ ಗಾಳಿಯ ವೇಗ ಗಂಟೆಗೆ 60 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಭಾಗದ ಜನರು ಮತ್ತು ಮೀನುಗಾರರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ :  ಆಂಧ್ರಪ್ರದೇಶದ ಕರಾವಳಿ ಭಾಗದ ಹಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ, ತೆಲಂಗಾಣ, ಮಾಹೆ, ಕಾರೈಕಲ್, ಕೇರಳ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಂಡಮಾರುತದ ಚಲನೆ ಹಾಗೂ ವಾಯುಭಾರ ಬದಲಾವಣೆಗಳ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.

ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ರೈತರು ಕೊಯ್ಲು ಮಾಡಿದ ಬೆಳೆ, ಕೃಷಿ ಉತ್ಪನ್ನಗಳ ಸಂಗ್ರಹಣೆ ಹಾಗೂ ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Cyclonic storm Murusu, which affected the southern coastal region of Andhra Pradesh, has moved towards the north-northwest, according to the India Meteorological Department. Winds of 40–50 kmph are expected, occasionally reaching 60 kmph. Heavy rainfall is forecast in several parts of coastal Andhra Pradesh, while parts of south interior Karnataka, Tamil Nadu, Puducherry, Telangana, Kerala, Mahe, Karaikal and Chhattisgarh may also receive heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ: ಮೂರು ತಿಂಗಳಲ್ಲಿ ಡೇ-ಕೇರ್ ಕೇಂದ್ರ ಸ್ಥಾಪನೆಗೆ ಗುರಿ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮುಂದಿನ ಮೂರು ತಿಂಗಳೊಳಗೆ ಕಿಮೋಥೆರಪಿ ಡೇ-ಕೇರ್ ಕೇಂದ್ರಗಳನ್ನು ಸ್ಥಾಪಿಸಲು…

13 hours ago

ಜನವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ – ಸಚಿವ ಖಂಡ್ರೆ

ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಾಗೂ 234 ತಾಲೂಕು…

14 hours ago

ಕರಾವಳಿಯಲ್ಲಿ ಮತ್ತೆ ಮಳೆ- ಸುಳ್ಯ, ಕಡಬ, ಪುತ್ತೂರಿನ ಕೆಲವೆಡೆ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧೆಡೆ ಹಾಗೂ ಕಡಬ, ಪುತ್ತೂರು ತಾಲೂಕಿನ…

15 hours ago

ಹವಾಮಾನ ವರದಿ | 25.11.2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ : ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು…

22 hours ago

ಸಮಯದ ಒತ್ತಡದಲ್ಲೂ ಗುಕೇಶ್ ಹೋರಾಟ – ಚೆಸ್ ಮೊದಲ ಪಂದ್ಯ ಡ್ರಾ

ವಿಶ್ವ ಚೆಸ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಭಾರತದ ಡಿ. ಗುಕೇಶ್ ಮತ್ತು ಉಜ್ಬೇಕಿಸ್ತಾನದ…

1 day ago

ಕನಿಷ್ಠ ವೇತನಕ್ಕಿಂತ Cost of living ಅಧಿಕ – ದುಡಿಯುವ ಕೈಗಳಿಗೆ ಬದುಕಲು ಸಾಕಾಗದ ವೇತನ..!

ದೇಶದ 37 ನಗರಗಳಲ್ಲಿ ಕನಿಷ್ಠ ವೇತನಕ್ಕಿಂತ ಜೀವನ ವೆಚ್ಚ (cost of living)…

1 day ago