ʼಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆ | ಸಂಕಷ್ಟದ ಸಮಯದಲ್ಲಿ ಗಾಂಧಿಯನ್ ಆರ್ಥಿಕತೆಯ ಪರಿಚಯ – ಅರವಿಂದ ಚೊಕ್ಕಾಡಿ

January 26, 2021
10:04 PM

ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್‌ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಇದೆಲ್ಲಾ ಸಂಗತಿಗಳು ದಾಖಲು ರೂಪದಲ್ಲಿ ಮುಸ್ಸಂಜೆಯ ಹೊಂಗಿರಣದಲ್ಲಿ ಕಂಡುಬರುತ್ತದೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.

Advertisement
Advertisement
Advertisement

Advertisement

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆದ ನಾ. ಕಾರಂತ,ಪೆರಾಜೆ ಅವರ ‘ ಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ಈ ಪುಸ್ತಕದಲ್ಲಿ ಬರುವ ವ್ಯಕ್ತಿಗಳು ಗಾಂಧಿಯನ್ ಆರ್ಥಿಕತೆಯನ್ನು ಅಭ್ಯಾಸ ಮಾಡಿದ್ದರೆಂದು ಅಲ್ಲ. ಗಾಂಧಿ ಹೇಳುವ ಮೊದಲೂ ಇದೆಲ್ಲ ನಮ್ಮ ಸಮಾಜದಲ್ಲಿ ಇತ್ತು. ಆದರೆ ನಮ್ಮ ಸಮಾಜದಲ್ಲಿ ನಿಜವಾಗಿ ಏನಿದೆ ಎಂಬುದನ್ನು ಹುಡುಕಲು ಗಾಂಧಿಗೆ ಮಾತ್ರ ಗೊತ್ತಿತ್ತು. ತಾನು ಹುಡುಕಿದ್ದನ್ನು ವ್ಯವಸ್ಥಿತವಾಗಿ ಗಾಂಧೀಜಿ ಹೇಳಿದರು ಎಂದರು.ಗಾಂಧಿಯನ್ ಇಕಾನಮಿ ಎಂದರೆ ಏನು?,ಇದೇ. ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ, ಇದೆಲ್ಲಾ ಈ ಪುಸ್ತಕದಲ್ಲಿ ದಾಖಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾವಿನಯಚಂದ್ರ ಕಿಲಂಗೋಡಿ ಮಾತನಾಡಿ,ದೇಶದಲ್ಲಿ ನಿಜವಾದ ಸ್ವಂತಿಕೆ ಇರುವುದು ಹಳ್ಳಿಗಳಲ್ಲಿ.ಕೊರೋನಾದಂತಹ ಸಮಯದಲ್ಲೂ ಹಳ್ಳಿಗಳು ಸೋಲಲಿಲ್ಲ, ಗಟ್ಟಿಯಾಗಿ ಬೆಳೆದವು. ಸಮಾಜದಲ್ಲಿ ಇರುವ ಧನಾತ್ಮಕ ಸಂಗತಿಗಳು ಹೆಚ್ಚು ಚರ್ಚೆಯಾಗಬೇಕು ಎಂದರು.

Advertisement

 

Advertisement

ಬರಹಗಾರ ನಾ.ಕಾರಂತ ಪೆರಾಜೆ ಮಾತನಾಡಿ ಕೊರೋನಾವು ಸಮಾಜದಲ್ಲಿ ಒಮ್ಮೆಲ್ಲೇ ತಲ್ಲಣ ಮೂಡಿಸಿತು. ಇದೇ ಸಮಯದಲ್ಲಿ ಅನೇಕ ಧನಾತ್ಮಕವಾದ ಬದಲಾವಣೆಗಳು ಕಂಡವು. ಇದರ ದಾಖಲಾತಿ ಅತೀ ಅಗತ್ಯವಾಗಿತ್ತು ಎಂದು ಹೇಳಿದರು.

ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರಮೋದ್‌ ಶುಭ ಹಾರೈಸಿದರು. ವೇದಿಕೆಯಲ್ಲಿ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ ಉಪಸ್ಥಿತರಿದ್ದರು.

Advertisement

ಇದೇ ವೇಳೆ ಬರಹಗಾರ ನಾ ಕಾರಂತ ಪೆರಾಜೆ ಅವರನ್ನು ಗೌರವಿಸಲಾಯಿತು.

ರೂರಲ್‌ ಮಿರರ್‌ ಪ್ರಕಾಶನದ ಮಹೇಶ ಪುಚ್ಚಪ್ಪಾಡಿ ಸ್ವಾಗತಿಸಿ ಪ್ರಸ್ತಾವನೆಗೈದು ವಂದಿಸಿದರು. ಕೃತಿಕಾಉದಯ್‌ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror